ಹುಬ್ಬಳ್ಳಿ: ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದ ಬೆನ್ನಲ್ಲೇ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಳ ಮಹ್ತವದ ಸಭೆ ನಡೆಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ಮೂಲಕ ಎಚ್ಚರಿಕೆ ನೀಡಿದೆ.
ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಲ, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಸರ್ಕಾರ ಸಾರಿಗೆ ನೌಕರ ಸಂಘದ ಜೊತೆ ಮಾತುಕತೆ ನಡೆಸದಿದ್ದರೆ ಮುಷ್ಕರ ನಡೆಸುವುದು ಖಚಿತ ಎಂದು ತಿಳಿಸಿದೆ.
ಈ ಬಗ್ಗೆ ಸರ್ಕಾರಕ್ಕೆ ನೋಟಿಸ್ ಕೂಡ ನೀಡಿದೆ. ರಾಜ್ಯ ಸರ್ಕಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾತುಕತೆ ನಡೆಸಿ ಚರ್ಚೆ ನಡೆಸಬೇಕು. ಇಲ್ಲವಾದಲ್ಲಿ ಆಗಸ್ಟ್ 5ರಿಂದ ರಾಜ್ಯಾದ್ಯಂತ ಒಂದೇ ಒಂದು ಬಸ್ ಕೂಡ ರಸ್ತೆಗೆ ಇಳಿಯಲ್ಲ. ಇದು ಖಚಿತ. ಎಲ್ಲಾ ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5ರಿಂದ ಅನಿರ್ದಿಷ್ಟಾವದಿ ಮುಷ್ಕರ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದೆ.
You Might Also Like
TAGGED:ಸಾರಿಗೆ ನೌಕರರು