HomeKarnatakaಅಂತರ ಜಿಲ್ಲಾ ವರ್ಗಾವಣೆ ನಿಯಮ ಸಡಿಲಿಕೆ: ಗೃಹ ಸಚಿವ ಪರಮೇಶ್ವರ್

ಅಂತರ ಜಿಲ್ಲಾ ವರ್ಗಾವಣೆ ನಿಯಮ ಸಡಿಲಿಕೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪೊಲೀಸ್ ದಂಪತಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಕೆಲವು ನಿಯಮಗಳ ಸಡಿಲಿಕೆಗೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಿರುವ ನಿಯಮಗಳು ಕಠಿಣವಾಗಿವೆ. ಅವುಗಳನ್ನು ಸಡಿಲಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಪೊಲೀಸ್ ದಂಪತಿ ಅಂತರ ಜಿಲ್ಲಾ ವರ್ಗಾವಣೆಯ ಕೆಲ ನಿಯಮ ಸಡಿಲಿಕೆ ಮಾಡಲಾಗುವುದು. ಉತ್ತರ ಕರ್ನಾಟಕ ಭಾಗದವರು ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಸ್ವಾಭಾವಿಕವಾಗಿ ಅವರಿಗೆ ತಮ್ಮ ಊರುಗಳ ಕಡೆ ಕೆಲಸ ಮಾಡಬೇಕೆಂಬ ಆಸೆ ಇರುತ್ತದೆ. ಅವರಿಗೆ ಹೇಗೆ ಅವಕಾಶ ಕಲ್ಪಿಸಬೇಕೆಂಬುದರ ಬಗ್ಗೆ ಚಿಂತನೆ ನಡೆದಿದೆ. ವರ್ಗಾವಣೆ ನಿಯಮಗಳನ್ನು ಸಡಿಲಿಕೆ ಮಾಡಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular