HomeLatest Newsಸಾರಿಗೆ ಸಂಸ್ಥೆ ಬಸ್ ಗೆ ಬೆಂಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಸಾರಿಗೆ ಸಂಸ್ಥೆ ಬಸ್ ಗೆ ಬೆಂಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಕಲಬುರಗಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಉಂಟಾಗಿ ಪ್ರಯಾಣಿಕರು ಆತಂಕಗೊಂಡ ಘಟನೆ ಗುರುವಾರ ನಡೆದಿದೆ.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮದಿ ಗ್ರಾಮದ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಈ ವೇಳೆಗೆ ಬಸ್ ಗೆ ಬೆಂಕಿ ಹೆಚ್ಚಾಗ ತೊಡಗಿದ್ದು ಸ್ಥಳೀಯರು ನೀರು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ಸಾರಿಗೆ ಬಸ್ ಮದರಿ ಗ್ರಾಮದಿಂದ ಜೇವರ್ಗಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬಸ್ ಗೆ ಬೆಂಕಿ ತಗುಲಿದ್ದರಿಂದ ಕೆಲಕಾಲ ಆತಂಕ ಉಂಟಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular