HomeKarnatakaರಾಜ್ಯ ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಸಿಹಿ ಸುದ್ದಿ

ರಾಜ್ಯ ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಾರಿಗೆ ನಿಗಮಗಳ ನಿವೃತ್ತ ನೌಕರರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

2023ರ ಮಾರ್ಚ್ ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ.15ರಷ್ಟು ಹೆಚ್ಚುವರಿ ವೇತನ ಸಿಗಲಿದೆ. 2023ರ ಮಾರ್ಚ್ ನಲ್ಲಿ ನಿವೃತ್ತಿಯಾದ ಅಧಿಕಾರಿಗಳು ಮತ್ತು ನೌಕರರಿಗೆ 2019ರ ಡಿಸೆಂಬರ್ 31ರಂದು ಪಡೆಯುವ ಮೂಲ ವೇತನವನ್ನು ಪರಿಗಣಿಸಿ ಶೇ.15ರಷ್ಟು ಹೆಚ್ಚಿಸಿ ವೇತನ ಶ್ರೇಣಿ ಪರಿಷ್ಕರಿಸಲು ಆದೆಶದಲ್ಲಿ ಉಲ್ಲೇಖಿಸಲಾಗಿದೆ.

ನಿವೃತ್ತಿ ನೌಕರರಿಗೆ ವೇತನ ಪರಿಷ್ಕರಣೆಯಲ್ಲಿ ಹೆಚ್ಚಿಸಿದ ವೇತನ ನೀಡಲು ನಾಲ್ಕು ಸಾರಿಗೆ ನಿಗಮಗಳಿಗೆ ಸುಮಾರು 220 ಕೋಟಿ ರೂ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular