HomeKarnatakaಖಾಸಗಿ ಬಸ್‌ಗಳಿಗೆ ಮಾರ್ಚ್ 31ರ ಗಡುವು ಕೊಟ್ಟ ಸಾರಿಗೆ ಇಲಾಖೆ

ಖಾಸಗಿ ಬಸ್‌ಗಳಿಗೆ ಮಾರ್ಚ್ 31ರ ಗಡುವು ಕೊಟ್ಟ ಸಾರಿಗೆ ಇಲಾಖೆ

ಕರ್ನಾಟಕದ ಸಾರಿಗೆ ಇಲಾಖೆ ಖಾಸಗಿ ಬಸ್‌ಗಳಿಗೆ ಮಾರ್ಚ್ 31ರ ಗಡುವು ನೀಡಿದೆ. ವಾಹನಗಳಲ್ಲಿ ಕಡ್ಡಾಯವಾಗಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ದಿನಾಂಕ 28-02-2026ರ ವರೆಗೆ ಅಂತಿಮ ಗಡುವು ನೀಡಲಾಗಿತ್ತು. ಅದನ್ನು ವಿಸ್ತರಣೆ ಮಾಡಲಾಗಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ (NHRC) ದಾಖಲಾಗಿರುವ ಪ್ರಕರಣ ಸಂಖ್ಯೆ:1834/90/0/2025ರ ಸಂಬಂಧ ಮಾನ್ಯ ಆಯೋಗವು ದಿನಾಂಕ 05.01.2026ರಂದು ಆದೇಶ ನೀಡಿ Central Institute of Road Transport (CIRT) ಸಂಸ್ಥೆಯವರು ನೀಡಿರುವ ಶಿಫಾರಸ್ಸುಗಳಂತೆ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಕೆಲವು ಸೂಚನೆಗಳನ್ನು ನೀಡಿತ್ತು.

AIS:052 ಮತ್ತು AIS:119 ರ ಮಾನದಂಡಗಳ ರೀತ್ಯ ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲಾ ಸಾಮಾನ್ಯ ಬಸ್ಸು, ಸ್ಲೀಪರ್ ಕೋಚ್ ಹಾಗೂ ಅಖಿಲ ಭಾರತ ಪ್ರವಾಸಿ ಬಸ್ಸುಗಳಲ್ಲಿ ಕೇಂದ್ರ ಮೋಟಾರು ವಾಹನ ನಿಯಮಗಳು 1989ರ ನಿಯಮ 125-C ರಲ್ಲಿ ತಿಳಿಸಿರುವಂತೆ ವಾಹನಗಳಲ್ಲಿ ಕಡ್ಡಾಯವಾಗಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ದಿನಾಂಕ 28-02-2026 ರವರೆಗೆ ಅಂತಿಮ ಗಡುವು ನೀಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದುವರೆದು, ಸರ್ಕಾರದ ಆದೇಶ ಸಂಖ್ಯೆ: ಟಿಡಿ 18 ಟಿಡಿಒ 2026, ದಿ:17-03-2026 ರಲ್ಲಿ, ಕೇಂದ್ರ ಮೋಟಾರು ವಾಹನ ನಿಯಮಗಳು 1989ರ ನಿಯಮ 125-C ರಲ್ಲಿ ತಿಳಿಸಿರುವಂತೆ ವಾಹನಗಳಲ್ಲಿ ಕಡ್ಡಾಯವಾಗಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ದಿನಾಂಕ 31/3/206 ಅಂತಿಮವಾಗಿ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

ನಂತರವೂ ಪ್ರಯಾಣಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ ಕುರಿತು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆ ಬೆಂಗಳೂರು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಖಾಸಗಿ ಸ್ಲೀಪರ್‌ ಬಸ್‌ಗಳಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಪ್ರಯಾಣಿಕರು ಮೃತಪಟ್ಟ ಹಿನ್ನಲೆಯಲ್ಲಿ ಒಟ್ಟು 11 ಪ್ರಯಾಣಿಕ ಸ್ನೇಹಿ ಕ್ರಮಗಳನ್ನು ಶಿಫಾರಸು ಮಾಡಲಾಗಿದೆ. ಇವುಗಳನ್ನು ಅಳವಡಿಕೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಯಾವ-ಯಾವ ಕ್ರಮಗಳು

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular