HomeLatest NewsBIG NEWS: ನಾಲ್ಕು ಸಾರಿಗೆ ನಿಗಮಗಳಿಂದ ಮುಷ್ಕರಕ್ಕೆ ನಿರ್ಧಾರ: ಆಗಸ್ಟ್ 5ರಿಂದ ಬಸ್ ಸಂಚಾರದಲ್ಲಿ ಭಾರಿ...

BIG NEWS: ನಾಲ್ಕು ಸಾರಿಗೆ ನಿಗಮಗಳಿಂದ ಮುಷ್ಕರಕ್ಕೆ ನಿರ್ಧಾರ: ಆಗಸ್ಟ್ 5ರಿಂದ ಬಸ್ ಸಂಚಾರದಲ್ಲಿ ಭಾರಿ ವ್ಯತ್ಯಯ

ಬೆಂಗಳೂರು: ರಾಜ್ಯಾದ್ಯಂತ ಸಾರ್ಗೆ ನೌಕರರು ಮತ್ತೆ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಆಗಸ್ಟ್ 5ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿವೆ. ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ಧಾವಧಿವರೆಗೆ ಮುಷ್ಕರಕ್ಕೆ ಕರೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular