ಬೆಂಗಳೂರು: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸಾರಿಗೆ ಸಿಬ್ಬಂದಿ ಬಸ್ ಸಂಚಾರ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ಸಾರಿಗೆ ಮುಖಂಡರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ವೇತನ ಹೆಚ್ಚಳ ಸಂಬಂಧ ಸಿಎಂ ಚರ್ಚೆ ನಡೆಸಲಿದ್ದಾರೆ. ಶೇಕಡ 25ರಷ್ಟು ವೇತನ ಹೆಚ್ಚಳಕ್ಕೆ ಸಾರಿಗೆ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಬಸ್ ಸಂಚಾರ ಸಂಪೂರ್ಣ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರರ ಸಂಘಟನೆಗಳು ಬಸ್ ಸಂಚಾರ ಬಂದ್ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವೇತನ ಹೆಚ್ಚಳ ಮಾಡದ ಸರ್ಕಾರದ ವಿರುದ್ಧ ಕಿಡಿಕಾರಿವೆ. ಸಂಘಟನೆಗಳ ಮುಖಂಡರ ಎಚ್ಚರಿಕೆ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಕರೆದಿದ್ದಾರೆ. ಸಭೆಯಲ್ಲಿ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.