HomeKarnataka ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಾರಿಗೆ ನೌಕರರಿಂದ ಕಪ್ಪು ಪಟ್ಟಿ ಪ್ರದರ್ಶನ

 ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಾರಿಗೆ ನೌಕರರಿಂದ ಕಪ್ಪು ಪಟ್ಟಿ ಪ್ರದರ್ಶನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬಲಿರುವ ಹಿನ್ನೆಲೆಯಲ್ಲಿ ಮೇ 20ರಂದು ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶವನ್ನು ಸಾರಿಗೆ ನೌಕರರ ಮುಷ್ಕರದ ಕಾರಣ ಮೇ 19ಕ್ಕೆ ಹಿಂದೂಡಲಾಗಿದೆ.

ಸಾಧನಾ ಸಮಾವೇಶದಲ್ಲಿ ಕಪ್ಪುಪಟ್ಟಿ ಪ್ರದರ್ಶಿಸಲು ಸಾರಿಗೆ ನೌಕರರ ಸಂಘಟನೆಗಳು ಮುಂದಾಗಿವೆ. ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಮೇ 20ರಂದು ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದಕ್ಕೂ ಮುನ್ನ ಮೇ 19 ರಂದು ತುಮಕೂರಿನಲ್ಲಿ ನಡೆಯುವ ಸರ್ಕಾರದ ಸಾಧನಾ ಸಮಾವೇಶ ವಿರೋಧಿಸಿ ಕಪ್ಪುಪಟ್ಟಿ ಪ್ರದರ್ಶಿಸಲು ಕೆಎಸ್ಆರ್ಟಿಸಿ ನೌಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.

ಬೆಂಗಳೂರಿನ ಪುರಭವನದಲ್ಲಿ ಶುಕ್ರವಾರ ನಡೆದ ಮುಷ್ಕರದ ಪೂರ್ವ ಸಿದ್ಧತಾ ಸಭೆಯಲ್ಲಿ ಮೇ 20ರಂದು ಮುಷ್ಕರ ನಡೆಸುವುದಾಗಿ ಮತ್ತೆ ಘೋಷಿಸಲಾಗಿದೆ. ಮೇ 19 ರಂದು ತುಮಕೂರು ಚಲೋ ನಡೆಸಿ ಜಿಲ್ಲಾಧಿಕಾರಿ ಕಚೇರಿ ಸಮೀಪದ ಟೌನ್ ಹಾಲ್ ನಲ್ಲಿ ಸಮಾವೇಶಗೊಂಡು ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶಿಸಲು ನಿರ್ಧರಿಸಲಾಗಿದೆ. ಅಷ್ಟರೊಳಗೆ ಸರ್ಕಾರ ಮಾತುಕತೆಗೆ ಮುಂದಾಗಿ ಬೇಡಿಕೆ ಈಡೇರಿಸುವ ಭರವಸೆ ನೀಡಿದಲ್ಲಿ ಹೋರಾಟದಿಂದ ಹಿಂದೆ ಸರಿಯುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular