HomeKarnatakaGOOD NEWS: ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ ಮಾಡಿದ ರಾಜ್ಯ...

GOOD NEWS: ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಸಾರಿಗೆ ನೌಕರರ ಹಲವು ಹೋರಾಟ, ಮುಷ್ಕರದ ಬಳಿಕ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಈ ತಿಂಗಳಿನಿಂದ ಸಾರಿಗೆ ನೌಕರರ ಮೂಲ ವೇತನ ಹೆಚ್ಚಳವಾಗಲಿದೆ. ರಾಜ್ಯ ಸರ್ಕಾರ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಮತ್ತು ಕೆಕೆಆರ್‌ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದೆ.

ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಹೊಸ ವೇತನ ಪರಿಷ್ಕರಣೆಯು 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ. ಈಗಾಗಲೇ ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೇತನ ಹೆಚ್ಚಳದಿಂದಾಗಿ ರಾಜ್ಯದ ಸುಮಾರು 1.05 ಲಕ್ಷ ಸಾರಿಗೆ ನೌಕರರಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80 ಕೋಟಿ ರೂ. ವೆಚ್ಚವಾಗಲಿದೆ.

ರಾಮಲಿಂಗಾರೆಡ್ಡಿ ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆದೇಶಿಸಿದ್ರು. ಈ ತಿಂಗಳಿನಿಂದ ಸಾರಿಗೆ ನೌಕರರ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular