HomeLatest NewsBREAKING: ಸಾರಿಗೆ ನೌಕರರ ಮುಷ್ಕರ ವಾಪಸ್: ಮಾರ್ಚ್ 2ರವರೆಗೆ ಸರ್ಕಾರಕ್ಕೆ ಗಡುವು

BREAKING: ಸಾರಿಗೆ ನೌಕರರ ಮುಷ್ಕರ ವಾಪಸ್: ಮಾರ್ಚ್ 2ರವರೆಗೆ ಸರ್ಕಾರಕ್ಕೆ ಗಡುವು

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಲ್ಕು ನಿಗಮಗಳ ಸಾರಿಗೆ ನೌಕರರು ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಜಂಟಿ ಕ್ರಿಯಾ ಸಮಿತಿ ಹಾಗೂ ಸರ್ಕಾರ ನಡೆಸಿದ ಸಭೆಯ ಬಳಿಕ ಸಾರಿಗೆ ನೌಕರರ ಮುಷ್ಕರವನ್ನು ವಾಪಸ್ ಪಡೆಯಲು ನಿರ್ಧರಿಸಲಾಯಿತು. ಸಭೆ ಬಳಿಕ ಜಂಟಿ ಕ್ರಿಯಾ ಸಮಿತಿ ಮುಖಂಡರು ಈ ಬಗ್ಗೆ ಘೋಷಣೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂಬಾಕಿ, ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ತೀರ್ಮಾನಿಸಲಾಗಿದೆ. ಸಾರಿಗೆ ನೌಕರರ ಬೇಡಿಕೆ ಈಡೆರಿಕೆಗೆ ಮಾರ್ಚ್ 2ರವರೆಗೆ ಸರ್ಕಾರಕ್ಕೆ ಗಡುವು ನೀಡಲಾಗುವುದು. ಅಷ್ಟರಲ್ಲಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಮಾರ್ಚ್ 2ರ ಬಳಿಕ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಮುಖಂಡರು ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆಯುವಂತೆ ಘೋಷಿಸುತ್ತಿದ್ದಂತೆ ಹಲವು ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣದಿಂದನೇ ನಮ್ಮ ಬೇಡಿಕೆ ಈಡೇರಿಸಬೇಕು. ನಾವು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪ್ರತಿಭಟನಾಕಾರರ ಮನವೊಲಿಕೆ ಯತ್ನ ನಡೆದಿದೆ. ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಇರುವುದಿಲ್ಲ. ಬಸ್ ಸಂಚಾರ ಕೂಡ ಯಥಾಸ್ಥಿತಿ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular