HomeLatest NewsBREAKING: ಸಾರಿಗೆ ನೌಕರರಿಂದ ಬೆಂಗಳೂರು ಚಲೋ ಕರೆ: ಚಿಕ್ಕಮಗಳೂರು KSRTC ಸಿಬ್ಬಂದಿಗಳಿಗೆ ಎಚ್ಚರಿಕೆ ನೋಟಿಸ್ ಜಾರಿ

BREAKING: ಸಾರಿಗೆ ನೌಕರರಿಂದ ಬೆಂಗಳೂರು ಚಲೋ ಕರೆ: ಚಿಕ್ಕಮಗಳೂರು KSRTC ಸಿಬ್ಬಂದಿಗಳಿಗೆ ಎಚ್ಚರಿಕೆ ನೋಟಿಸ್ ಜಾರಿ

ಚಿಕ್ಕಮಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಾಗೂ ಸಿಬ್ಬಂದಿಗಳು ಬೆಂಗಳೂರು ಚಲೋ, ಮುಷ್ಕರಕ್ಕೆ ಕರೆ ನೀಡಿದ್ದು, ಸಾರಿಗೆ ಸಂಚಾರದಲ್ಲಿ ಮತ್ತೆ ವ್ಯತ್ಯಯವಾಗುವ ಸಾಧ್ಯತೆ ದಟ್ಟವಾಗಿದೆ.

ಸರ್ಕಾರದ ವಿರುದ್ಧ ಜನವರಿ 29ರಿಂದ ಸಾರಿಗೆ ನೌಕರರು, ಸಿಬ್ಬಂದಿಗಳ ಮುಷ್ಕರ ಹಾಗೂ ಬೆಂಗಳೂರು ಚಲೋಗೆ ಸಾರಿಗೆ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ವಿಭಾಗದ ಕೆ.ಎಸ್,ಆರ್.ಟಿ.ಸಿ ಸಾರಿಗೆ ನೌಕರರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಮುಷ್ಕರ, ಪ್ರತಿಭಟನೆ ನಡೆಸದಂತೆ ನೋಟಿಸ್ ಜಾರಿ ಮಾಡಲಾಗಿದೆ.

ಸರ್ಕಾರದ ವಿರುದ್ಧ ಸಾರಿಗೆ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಅಣಿಯಾಗಿದ್ದು, ಜನವರಿ 29ರಂದು ಬೆಂಗಳೂರು ಚಲೋಗೆ ನೌಕರರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ರಜೆ ಪಡೆಯದಂತೆ ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವೇಳೆ ರಜೆ ಪಡೆದರೆ ವೇತನ ನೀಡದೇ ಶಿಸ್ತುಕ್ರಮ ಕೈಗೊಳ್ಳುವ ಎಚ್ಚಿರಿಕೆ ನೀಡಲಾಗಿದೆ. ಈ ಬಗ್ಗೆ ಸಾರಿಗೆ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿರುವ ಕೆ.ಎಸ್.ಆರ್.ಟಿ.ಸಿ ಡಿಸಿ ಎನ್.ನಾಗೇಂದ್ರ, ಖಡಕ್ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular