ಬೆಂಗಳೂರು: ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಮತ್ತೆ ಮುಷ್ಕರ ಕೈಗೊಳ್ಳುವ ಸಾಧ್ಯತೆ ಇದೆ.
ವೇತನ ಹೆಚ್ಚಳ ಕುರಿತಂತೆ ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಹಗ್ಗ ಜಗ್ಗಾಟ ಮುಂದುವರೆದಿದ್ದು, ಮತ್ತೊಂದು ಸುತ್ತಿನ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಇತ್ತೀಚೆಗೆ ಸಭೆ ನಡೆಸಲಾಗಿದೆ. ಈ ವೇಳೆ ಶೇಕಡ 7ರಷ್ಟು ವೇತನ ಪರಿಷ್ಕರಣೆಗೆ ಸರ್ಕಾರ ಒಪ್ಪಿಕೊಂಡಿತ್ತು. ಆದರೆ ನೌಕರರು ಇದನ್ನು ಒಪ್ಪದೇ 25% ರಷ್ಟು ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದಾರೆ.
ಹೀಗಾಗಿ ಸಂಧಾನ ಸಭೆ ವಿಫಲವಾಗಿತ್ತು. ಸಾರಿಗೆ ನೌಕರರ ಇತರೆ ಸಂಘಗಳೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

