HomeLatest Newsಸಾರಿಗೆ ನೌಕರರ ಮುಷ್ಕರ: ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ

ಸಾರಿಗೆ ನೌಕರರ ಮುಷ್ಕರ: ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ

ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರ ಕೈಗೊಳ್ಳಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ. 5ರಂದು ನಾಲ್ಕು ಸಾರಿಗೆ ನಿಗಮದ ನೌಕರರು ಮುಷ್ಕರ ಕೈಗೊಂಡಿದ್ದರು. ಹೈಕೋರ್ಟ್ ಆದೇಶದ ಕಾರಣ ಮುಷ್ಕರ ಕೈ ಬಿಡಲಾಗಿತ್ತು. ಈ ಬಾರಿ ಮುಷ್ಕರದ ದಿನಾಂಕವನ್ನು ಘೋಷಿಸದೆ ಹಠಾಟ್ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳ ಕುರಿತಾಗಿ ಶನಿವಾರ ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲಾಗಿದೆ. ಬೇಡಿಕೆ ಈಡೇರಿಸುವ ಕುರಿತು ಒಮ್ಮತಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಮುಷ್ಕರ ಕೈಗೊಳ್ಳಲು ಸಾರಿಗೆ ನೌಕರರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಸಿಎಂ ಜೊತೆಗೆ ನಾಲ್ಕು ಸುತ್ತಿನ ಸಭೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆಗೆ ಮೂರು ಸುತ್ತಿನ ಸಭೆ ನಡೆದಿದ್ದರೂ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮತ್ತು ವೇತನ ಹಿಂಬಾಕಿ ನೀಡಲು ಮುಂದಾಗುತ್ತಿಲ್ಲ.

ಹೀಗಾಗಿ ಬುಧವಾರದಿಂದ ರಾಜ್ಯದ ಎಲ್ಲಾ ಬಸ್ ಡಿಪೋಗಳಿಗೆ ಭೇಟಿ ನೀಡಿ ಮುಷ್ಕರಕ್ಕೆ ಸಿದ್ದರಾಗಲು ಸಾರಿಗೆ ನೌಕರರು ಮನವಿ ಮಾಡಲಿದ್ದಾರೆ. ದಿನಾಂಕ ನಿಗದಿ ಮಾಡಿದರೆ ಸರ್ಕಾರ ಮುಷ್ಕರಕ್ಕೆ ಅಡ್ಡಿ ಮಾಡಬಹುದು ಎನ್ನುವ ಕಾರಣಕ್ಕೆ ದಿನಾಂಕ ನಿಗದಿ ಮಾಡದೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಮಿಕ ಇಲಾಖೆಗೆ ಮುಷ್ಕರದ ನೋಟಿಸ್ ನೀಡದೆ ಏಕಾಏಕಿ ಬಸ್ ಸಂಚಾರ ನಿಲ್ಲಿಸಲು ಚಿಂತನೆ ನಡೆಸಿದ್ದಾರೆ. ರಾತ್ರೋ ರಾತ್ರಿ ಸಾರಿಗೆ ಮುಖಂಡರು ಸಂದೇಶ ಕಳುಹಿಸಿ ಬಸ್ ಸಂಚಾರ ನಿಲ್ಲಿಸಲು ಚಿಂತನೆ ನಡೆಸಿದ್ದಾರೆ. 38 ತಿಂಗಳ ವೇತನ ಬಾಕಿ ಮತ್ತು ವೇತನ ಹೆಚ್ಚಳ ಬೇಡಿಕೆ ಈಡೇರಿಸಬೇಕೆಂದು ನೌಕರರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular