ಬೆಂಗಳೂರು : ಸಾರಿಗೆ ನೌಕರರ ಮುಷ್ಕರದ ಪರಿಣಾಮ ತುಮಕೂರು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತುಮಕೂರು ವಿವಿಯ ಸ್ನಾತಕಪೂರ್ವ ಹಾಗೂ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಯಾಗಿದೆ.
ಅದೇ ರೀತಿ ಕೊಪ್ಪಳ ವಿವಿ ಪರೀಕ್ಷೆ ಮುಂದೂಡಿಕೆಯಾಗಿದೆ. ಕೊಪ್ಪಳ ವಿವಿಯ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದೆ.ಶೀಘ್ರವೇ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಕೊಪ್ಪಳ ವಿವಿ ಕುಲಪತಿ ಬಿಕೆ ರವಿ ತಿಳಿಸಿದ್ದಾರೆ.