HomeLatest Newsರಾಜ್ಯಾದ್ಯಂತ ನಾಳೆ ಬೆಳಿಗ್ಗೆಯಿಂದಲೇ ಸಾರಿಗೆ ನೌಕರರ ಮುಷ್ಕರ: 23 ಸಾವಿರ ಬಸ್ ಸಂಚಾರದಲ್ಲಿ ವ್ಯತ್ಯಯ

ರಾಜ್ಯಾದ್ಯಂತ ನಾಳೆ ಬೆಳಿಗ್ಗೆಯಿಂದಲೇ ಸಾರಿಗೆ ನೌಕರರ ಮುಷ್ಕರ: 23 ಸಾವಿರ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗಸ್ಟ್ 5 ರಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯುವುದು ಅನುಮಾನವೆಂದು ಹೇಳಲಾಗಿದೆ.

1.2 ಲಕ್ಷ ಕಾರ್ಮಿಕರು ಹೋರಾಟ ಕೈಗೊಂಡಿದ್ದಾರೆ. ವೇತನ ಕಡಿತ, ಎಸ್ಮಾ ಜಾರಿ ಬೆದರಿಕೆಗೂ ನೌಕರರು ಬಗ್ಗುತ್ತಿಲ್ಲ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಆಗಸ್ಟ್ 5ರ ನಾಳೆಯಿಂದ ಸಾರಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular