ಬೆಂಗಳೂರು: ವಿಮಾನಗಳ ಹಾರಾಟ ರದ್ದಾಗಿ ಪ್ರಯಾಣಕ್ಕೆ ತೊಂದರೆಯಾಗಿರುವ ಬಗ್ಗೆ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಂದ ಮನವಿಗಳು ಬಂದ ಹಿನ್ನೆಲೆಯಲ್ಲಿ ಪ್ರವೇಶ ಪ್ರಕ್ರಿಯೆಗೆ ಮತ್ತೊಮ್ಮೆ ದಿನಾಂಕ ವಿಸ್ತರಿಸಲಾಗಿದೆ.
ಛಾಯ್ಸ್ ದಾಖಲಿಸಲು ಡಿ.8ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ.
ಛಾಯ್ಸ್-1 & 2 ದಾಖಲಿಸಿದವರು ಡಿ.8ರಂದು 12.30ರೊಳಗೆ ಶುಲ್ಕ ಪಾವತಿಸಬೇಕು.
ಛಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಡಿ.8ರಂದು ಮಧ್ಯಾಹ್ನ 2.30ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಬೇಕು.
ಮೂಲ ದಾಖಲೆ ಸಲ್ಲಿಸಿದ ನಂತರ ಡಿ.8ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
#PGNEET-25: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಂದ, ವಿಮಾನಗಳ ಹಾರಾಟ ರದ್ದಾಗಿ ಪ್ರಯಾಣಕ್ಕೆ ತೊಂದರೆಯಾಗಿರುವ ಬಗ್ಗೆ ಮನವಿಗಳು ಬಂದ ಹಿನ್ನೆಲೆಯಲ್ಲಿ ಪ್ರವೇಶ ಪ್ರಕ್ರಿಯೆಗೆ ಮತ್ತೊಮ್ಮೆ ದಿನಾಂಕ ವಿಸ್ತರಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) December 6, 2025
ಛಾಯ್ಸ್ ದಾಖಲಿಸಲು ಡಿ.8ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ…
