HomeKarnatakaBREAKING: ಮರಕ್ಕೆ ಕಾರ್ ಡಿಕ್ಕಿ, ಅಪಘಾತದಲ್ಲಿ ಓರ್ವ ಸಾವು, ಐವರಿಗೆ ಗಂಭೀರ ಗಾಯ

BREAKING: ಮರಕ್ಕೆ ಕಾರ್ ಡಿಕ್ಕಿ, ಅಪಘಾತದಲ್ಲಿ ಓರ್ವ ಸಾವು, ಐವರಿಗೆ ಗಂಭೀರ ಗಾಯ

ಧಾರವಾಡ: ಮರಕ್ಕೆ ಕಾರ್ ಡಿಕ್ಕಿಯಾಗಿ ಓರ್ವ ಸಾವು ಕಂಡಿದ್ದು, ಐವರಿಗೆ ಗಂಭೀರ ಗಾಯಗಳಾದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾರ್ ನಲ್ಲಿದ್ದ ಸುಶೀಲ್ ಕುಮಾರ್ ದೇಶಪಾಂಡೆ(33) ಮೃತಪಟ್ಟವರು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಧಾರವಾಡದಿಂದ ಕಾರವಾರಕ್ಕೆ ಸ್ನೇಹಿತನ ಮದುವೆಗೆ ತೆರಳಿದ್ದ ಇವರು ಮದುವೆ ಮುಗಿಸಿಕೊಂಡು ಹಿಂತಿರುಗುವಾಗ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿಗಾಗಿ ಅವಘಡ ಸಂಭವಿಸಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular