ಚಲಿಸುತ್ತಿದ್ದ ವಾಹನದ ಮೇಲೆ ಬಿದ್ದ ಮರ; 8 ಜನರಿಗೆ ಗಂಭೀರ ಗಾಯ

ರಾಮನಗರ: ಚಲಿಸುತ್ತಿದ್ದ ವಾಹನದ ಮೇಲೆ ಏಕಾಏಕಿ ಮರ ಬಿದ್ದ ಪರಿಣಾಮ 8 ಜನರು ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಯಲಾಚಿಪಾಳ್ಯ ಗ್ರಾಮದ ಬಳಿ ಟಾಟಾ ಏಸ್ ವಾಹನದ ಮೇಲೆ ಮರ ಬಿದ್ದಿದ್ದು, ವಾಹನ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಚಾಲಕ ಸೇರಿ 8 ಜನರಿಗೆ ಗಾಯಗಳಾಗಿವೆ. ಅವರಲ್ಲಿ ಮೂವರು ಗಂಭೀರವಾಗಿ ಗಾಯಗೊಂದಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚನ್ನಪಟ್ಟಣ ಗ್ರಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read