HomeLatest NewsBREAKING : ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ‘ಸಾಲುಮರದ ತಿಮ್ಮಕ್ಕ’ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.!

BREAKING : ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ‘ಸಾಲುಮರದ ತಿಮ್ಮಕ್ಕ’ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.!

ಬೆಂಗಳೂರು : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ‘ಸಾಲು ಮರದ ತಿಮ್ಮಕ್ಕ’ ನಿನ್ನೆ (114) ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿದೆ.ಬೆಂಗಳೂರಿನ ಜ್ಞಾನಭಾರತಿ ಸಮೀಪದ ಕಲಾ ಗ್ರಾಮದ ಆವರಣದಲ್ಲಿ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲೇ ಅವರ ಅಂತ್ಯಕ್ರಿಯೆ ನೆರವೇರಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಾಲು ಮರದ ತಿಮ್ಮಕ್ಕ ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದರು .ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ ಬಳಿಕ ಕಲಾ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಜ್ಞಾನಭಾರತಿ ಸಮೀಪದ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತಕ್ರಿಯೆ ನಡೆದಿದೆ.

3 ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಸಚಿವ ಈಶ್ವರ್ ಖಂಡ್ರೆ ಮತ್ತಿತರರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲುಮರದ ತಿಮ್ಮಕ್ಕ ಯಾರು..? ಅವರ ಹಿನ್ನೆಲೆ ಏನು

ಸಾಲುಮರದ ತಿಮ್ಮಕ್ಕ (ಜನನ 30 ಜೂನ್ 1911), ಆಲ ಮರದ ತಿಮ್ಮಕ್ಕ ಎಂದೂ ಕರೆಯಲ್ಪಡುವ ಇವರು ಕರ್ನಾಟಕ ರಾಜ್ಯದ ಒಬ್ಬ ಭಾರತೀಯ ಪರಿಸರವಾದಿ , ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವಿನ 4.5 – ಕಿಲೋಮೀಟರ್ ( 2.8 ಮೈಲಿ ) ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಡುವ ಮತ್ತು ಅವುಗಳನ್ನು ಪೋಷಿಸುವ ಕಾರ್ಯಕ್ಕೆ ಹೆಸರುವಾಸಿಯಾಗಿದ್ದಾರೆ . ಅವರ ಕೆಲಸವನ್ನು ಭಾರತ ಸರ್ಕಾರ ಗುರುತಿಸಿತು ಮತ್ತು ಅವರಿಗೆ 2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು.

ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ.

ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು .

ಪ್ರಶಸ್ತಿಗಳು

  1. ರಾಷ್ಟ್ರೀಯ ಪೌರ ಪ್ರಶಸ್ತಿ – ೧೯೯೫
  2. ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – ೧೯೯೭
  3. ವೀರಚಕ್ರ ಪ್ರಶಸ್ತಿ – ೧೯೯೭
  4. ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
  5. ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
  6. ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – ೨೦೦೦
  7. ಗಾಡ್ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – ೨೦೦೬
  8. ಪಂಪಾಪತಿ ಪರಿಸರ ಪ್ರಶಸ್ತಿ
  9. ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
  10. ವನಮಾತೆ ಪ್ರಶಸ್ತಿ
  11. ಮಾಗಡಿ ವ್ಯಕ್ತಿ ಪ್ರಶಸ್ತಿ
  12. ಶ್ರೀಮಾತಾ ಪ್ರಶಸ್ತಿ
  13. ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
  14. ಕರ್ನಾಟಕ ಪರಿಸರ ಪ್ರಶಸ್ತಿ
  15. ಮಹಿಳಾರತ್ನ ಪ್ರಶಸ್ತಿ
  16. ನ್ಯಾಷನಲ್ ಸಿಟಿಜನ್ ಪ್ರಶಸ್ತಿ
  17. ರಾಜ್ಯೋತ್ಸವ ಪ್ರಶಸ್ತಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular