HomeKarnatakaಮರಗಳ ಅಕ್ರಮ ಕಡಿತಲೆ ಪ್ರಕರಣ: ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಸ್ಪೆಂಡ್

ಮರಗಳ ಅಕ್ರಮ ಕಡಿತಲೆ ಪ್ರಕರಣ: ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಸ್ಪೆಂಡ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಖಂಡಿಕ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ, ಹಂಸಗಾರು, ಗಿಳಿಗಾರು ಗ್ರಾಮದಲ್ಲಿ ಆಕೆಶಿಯಾ ಮರಗಳ ಅಕ್ರಮ ಕಡಿತಲೆ, ಸಾಗಣೆ ವಿಷಯದಲ್ಲಿ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ತಾಳಗುಪ್ಪದ ಉಪ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಅರಣ್ಯ ರಕ್ಷಣೆಗೆ ಮುಂಜಾಗ್ರತೆ ಕ್ರಮ ವಹಿಸುವಲ್ಲಿ ವಿಫಲ, ಬೇಜವಾಬ್ದಾರಿ ಮತ್ತು ಕರ್ತವ್ಯ ಲೋಪ ಸೇರಿದಂತೆ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ತನಿಕೆಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಅವರನ್ನು ಅಮಾನತು ಮಾಡಲಾಗಿದೆ.

ಮರಗಳ ಅಕ್ರಮ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ವರದಿ ಸಲ್ಲಿಸಲು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರ್ದೇಶಿಸಿದ್ದರು. ಸಮಗ್ರ ತನಿಖೆ ನಡೆಸಿ ಕರ್ತವ್ಯಲೋಪ ಕಂಡು ಬಂದ ಹಿನ್ನಲೆಯಲ್ಲಿ ಸಂತೋಷ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಅಮಾನತು ಅವಧಿಯಲ್ಲಿ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular