ಕಾರ್ಕಳ: ಫೈರ್ ಸೀಸನ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಚಾರಣಿಗರ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಇಂದಿನಿಂದ ಚಾರಣ ನಿಷೇಧಿಸಲಾಗಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯಗಳ ವ್ಯಾಪ್ತಿಯಲ್ಲಿ ಎಲ್ಲಾ ಚಾರಣ ಪಥಗಳಿಗೆ ಇಂದಿನಿಂದ ನಿಷೇಧ ಹೇರಲಾಗಿದೆ. ಜನವರಿ 14 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಮಾಹಿತಿ ನೀಡಿದ್ದಾರೆ.

