HomeKarnatakaBIGG NEWS : ಚಾರಣ ಪ್ರಿಯರೇ ಇತ್ತ ಗಮನಿಸಿ : ಟ್ರಕ್ಕಿಂಗ್ ಗೆ ರಾಜ್ಯ ಸರ್ಕಾರದಿಂದ...

BIGG NEWS : ಚಾರಣ ಪ್ರಿಯರೇ ಇತ್ತ ಗಮನಿಸಿ : ಟ್ರಕ್ಕಿಂಗ್ ಗೆ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ನಿರ್ಬಂಧ..!

ಬೆಂಗಳೂರು : ಅನಧಿಕೃತ ಟ್ರೆಕ್ಕಿಂಗ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣಕ್ಕೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ.

ಆನ್ಲೈನ್ ಬುಕ್ಕಿಂಗ್ ಇಲ್ಲದ ಚಾರಣ ಪಾಯಿಂಟ್ಗಳಿಗೆ ನಿಷೇಧ ಹೇರಲಾಗಿದ್ದು, ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಕಾರಣ ನಿಷೇಧಿಸಲಾಗಿದೆ.ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದು, ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಜ.26ರಂದು ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ಕೊಟ್ಟ ಹಿನ್ನೆಲೆಯಲ್ಲಿ ಅರಣ್ಯದೊಳಗೆ ಜನಜಂಗುಳಿ ತಪ್ಪಿಸಲು ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ಸರ್ಕಾರ ತಾತ್ಕಾಲಿಕ ನಿರ್ಬಂಧ ವಿಧಿಸಿದೆ ಎಂದಿದ್ದಾರೆ.

ಏನಿದೆ ಆದೇಶದಲ್ಲಿ..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಯುವಜನರಲ್ಲಿ ಇತ್ತೀಚೆಗೆ ಅರಣ್ಯವ್ಯಾಪ್ತಿಯ ಗಿರಿ ಶಿಖರಗಳಲ್ಲಿ ಚಾರಣ ಮಾಡುವ ಹವ್ಯಾಸ ಅಧಿಕವಾಗಿದ್ದು, ಇದು ವಾರಾಂತ್ಯದಲ್ಲಿ ಜನದಟ್ಟಣೆಗೆ ಕಾರಣವಾಗಿದೆ. ಹೀಗೆ ಬರುವವರು ಅರಣ್ಯದ ಅಂಚಿನ ಗ್ರಾಮಗಳಲ್ಲಿ ಮತ್ತು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಮನಸೋ ಇಚ್ಛೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಉಳಿದ ಆಹಾರ ಪದಾರ್ಥ ಇತ್ಯಾದಿಗಳನ್ನು ಎಸೆಯುತ್ತಿದ್ದು, ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಡಿ. 26 ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಮಾಧ್ಯಮಗಳಲ್ಲೂ ವರದಿಯಾಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ. ಆತಂಕ ವ್ಯಕ್ತಪಡಿಸಿದ್ದಾರೆ. ಹೀಗೆ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಜನರು ದಟ್ಟ ಅರಣ್ಯವಿರುವ ಗಿರಿ ಪ್ರದೇಶಗಳಿಗೆ, ಪಶ್ಚಿಮಘಟ್ಟಕ್ಕೆ ಪ್ರತಿವಾರವೂ ಆಗಮಿಸಿದರೆ ನಿಯಂತ್ರಿಸುವುದು ಮತ್ತು ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸವಾಲಾಗುತ್ತದೆ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ ಮತ್ತು ಜಲ ಮೂಲಗಳೂ ಕಲುಷಿತಗೊಳ್ಳುವ ಅಪಾಯ ಇದೆ.

ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಚಾರಣ ತಾಣ (ಟ್ರಕ್ಕಿಂಗ್ ಪಾಯಿಂಟ್)ಗಳಲ್ಲೂ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮತ್ತು ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯ ವಿಧಾನ (SOP) ರೂಪಿಸುವವರೆಗೆ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲ ಚಾರಣ ತಾಣಗಳಲ್ಲಿ ತಾತ್ಕಾಲಿಕವಾಗಿ ಚಾರಣ ನಿರ್ಬಂಧಿಸುವಂತೆ ಸೂಚಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular