HomeKarnatakaಟ್ರೆಕಿಂಗ್ ಗೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ: 3 ದಿನ ಕಳೆದರೂ ಸಿಗದ ಸುಳಿವು: ಇಂದೂ...

ಟ್ರೆಕಿಂಗ್ ಗೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ: 3 ದಿನ ಕಳೆದರೂ ಸಿಗದ ಸುಳಿವು: ಇಂದೂ ಕೂಡ ತೀವ್ರಗೊಂಡಿರುವ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಅಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ ಆಕೆಯ ಸುಳಿವು ಸಿಕ್ಕಿಲ್ಲ. ನಾಲ್ಕು ತಂಡಗಳನ್ನು ರಚಿಸಿ ಶೋಧಕಾರ್ಯಾಚರಣೆ ನಡೆಸುತ್ತಿದ್ದರೂ ಶರಣ್ಯಾ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ.

ತಡಿಯಂಡಮೋಳ್ ಬೆಟ್ಟದಲ್ಲಿ ಇಂದು ನಾಲ್ಕನೆ ದಿನದ ಶೋಧಕಾರ್ಯಾಚರಣೆ ಮುಂದುವರೆದಿದೆ. ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅರಣ್ಯ ಇಆಲ್ಖೆ ಹಾಗೂ ಪೊಲೀಸ್ ಸಿಬಂದಿಗಳು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಶರಣ್ಯಾಳಿಗೆ ಟ್ರೆಕಿಂಗ್ ನಲ್ಲಿ 15 ವರ್ಷಗಳ ಅನುಭವವಿದೆ. ಆದಾಗ್ಯೂ ದಾರಿ ತಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಏಪ್ರಿಲ್ 2 ರಂದು ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದು, ಆಕೆಯ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಕೇರಳದ ಕೋಯಿಕ್ಕೋಡ್ ನಿವಾಸಿ 35 ವರ್ಷದ ಶರಣ್ಯಾ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಿಂದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದಳು. ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್​ಗೆ ತೆರಳಲು ಅರಣ್ಯ ಇಲಾಖೆಯ ಚೆಕ್​​ಪೋಸ್ಟ್​​ ಬಳಿ ಈಕೆ ಬಂದಿದ್ದಳು. ಆದ್ರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್ ಬಂದ ಬಳಿಕ ಅವರ ಜೊತೆ ಈಕೆಯನ್ನ ಕಳುಹಿಸಲಾಗಿತ್ತು. ಆದರೆ ಶರಣ್ಯಾ ಬೆಟ್ಟದಿಂದ ವಾಪಸ್​​ ಬಾರದ ಕಾರಣ, ಆಕೆಗಾಗಿ ಕಳೆದ ಮೂರು ದಿನಗಳಿಂದ ಶೋಧ ನಡೆಯುತ್ತಿದೆ.

ಬೆಳಿಗ್ಗೆ ಟ್ರೆಕ್ಕಿಂಗ್​​ಗೆಂದು ತೆರಳಿದ್ದವರು ಮಧ್ಯಾಹ್ನ 1.30ರ ವೇಳೆಗೆ ಅರಣ್ಯ ಇಲಾಖೆಯ ಚೆಕ್​​ ಪೋಸ್ಟ್​​ ಬಳಿ ಹಿಂದಿರುಗಬೇಕಿತ್ತು. ಹೀಗಾಗಿ ಶರಣ್ಯಾಳನ್ನು ಕರೆದೊಯ್ಯಲೆಂದು ಹೋಮ್​​ ಸ್ಟೇ ಮಾಲೀಕ ತಮ್ಮ ಸ್ಕೂಟಿ ಸಮೇತ ಸ್ಥಳಕ್ಕೆ ಬಂದಿದ್ದರು. ಆ ಬಳಿಕ ಶರಣ್ಯಾಗೆ ಅವರು ಕರೆ ಮಾಡಿದಾಗ ಮೊದಲು ನಾಟ್ ರೀಚೇಬಲ್ ಬಂದಿದೆ. ಮತ್ತೆರಡು ಬಾರಿ ಪ್ರಯತ್ನಿಸಿದಾಗ ಕರೆ ಸ್ವೀಕರಿಸಿದ ಆಕೆ, ತಾನು ದಾರಿ ತಪ್ಪಿದ್ದೇನೆ ಎಂದು ಹೇಳಿದ್ದಾಳೆ. ಅಷ್ಟರಲ್ಲಿ ಫೋನ್ ಕಟ್ ಆಗಿದೆಯಂತೆ. ಅದಾದ ಬಳಿಕ ಫೋನ್​​ ಮತ್ತೆ ಕನೆಕ್ಟ್ ಆಗಿಲ್ಲ. ಕೂಡಲೇ ಅವರು ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದು, ಎಲ್ಲರೂ ಸೇರಿ ಸಂಜೆ ಬೆಟ್ಟದ ಮೇಲೆ ಹೋಗಿದ್ದಾರೆ. ಆದರೆ ಅಲ್ಲೆಲ್ಲೂ ಯುವತಿ ಕಂಡಿಲ್ಲ. ಹಾಗಾಗಿ ಮತ್ತಷ್ಟು ಅರಣ್ಯ ಇಲಾಖೆ, ಪೊಲಿಸ್ ಇಲಾಖೆ ಸಿಬ್ಬಂದಿ ಸೇರಿ ಸ್ಥಳೀಯರೆಲ್ಲರೂ ಯುವತಿಗಾಗಿ ಹುಡುಕಿದ್ದಾರೆ. ಎಲ್ಲೂ ಕೂಡ ಆಕೆಯ ಸುಳಿವೇ ಸಿಕ್ಕಿಲ್ಲ.

ಅರಣ್ಯ ಮತ್ತು ಪೊಲೀಸ್ ಇಲಾಖೆ ಹಾಗೂ ನಕ್ಸಲ್ ನಿಗ್ರಹ ಪಡೆಯ 60ಕ್ಕೂ ಅಧಿಕ ಸಿಬ್ಬಂದಿ, ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 15 ವರ್ಷಗಳಿಂದ ಟ್ರೆಕ್ಕಿಂಗ್ ಹೋಗಿ ಅನುಭವ ಹೊಂದಿರುವ ಯುವತಿ ದಾರಿ ತಪ್ಪಿ ನಾಪತ್ತೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಹಾಗಾಗಿ ಕಾಡು ಪ್ರಾಣಿಗಳ ದಾಳಿಗೆ ಯುವತಿ ತುತ್ತಾಗಿರಬಹುದಾ? ಎಂಬ ಶಂಕೆ ಇದೆ. ಅದೂ ಅಲ್ಲದೆ ಬೆಟ್ಟದ ದಾರಿ ಬಹಳ ಸ್ಪಷ್ಟವಾಗಿದ್ದು, ಎಲ್ಲಿಯೂ ದಾರಿ ತಪ್ಪುವ ಸಾಧ್ಯತೆ ಇಲ್ಲ. ಹೀಗಿರುವಾಗ ಟ್ರೆಕ್ಕಿಂಗ್ ಅನುಭವ ಇರುವ ಈಕೆ ಹೇಗೆ ದಾರಿ ತಪ್ಪುತ್ತಾಳೆ ಎನ್ನುವ ಪ್ರಶ್ನೆ ಮೂಡಿದೆ. ಅದೂ ಅಲ್ಲದೆ, ಅರಣ್ಯ ಇಲಾಖೆಯ ಚೆಕ್​ ಪೋಸ್ಟ್ ಬಳಿಯ ಸಿಸಿಟಿವಿ ಕೆಲಸ ಮಾಡದೆ ಇರೋದು ಕೂಡ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇಂದು ನಾಲ್ಕನೇ ದಿನದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular