ಅಂಗುಲ್: ಒಡಿಶಾದ ಅಂಗುಲ್ ಜಿಲ್ಲೆಯ ಬಗಾಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಅಪರಿಚಿತ ಯುವಕರು ಬುಡಕಟ್ಟು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಭಾನುವಾರ ತನ್ನ ಸೋದರಳಿಯನೊಂದಿಗೆ ಯಾವುದೋ ಕೆಲಸಕ್ಕಾಗಿ ಛೇಂಡಿಪಾಡ ಪ್ರದೇಶದ ಆಸ್ಪತ್ರೆಗೆ ಹೋಗಿದ್ದರು. ಆಸ್ಪತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಒಂಟಿತನದ ಲಾಭ ಪಡೆದು ಬಾರಮಂಚ ಗ್ರಾಮದ ಬಳಿ ಮೂವರು ಪುರುಷರು ಅವರನ್ನು ಅಡ್ಡಗಟ್ಟಿದ್ದಾರೆ. ಆರೋಪಿಗಳು ಆಕೆಯನ್ನು ಬಲವಂತವಾಗಿ ಮುಖ್ಯ ರಸ್ತೆಯಿಂದ ಸ್ವಲ್ಪ ದೂರದಲ್ಲಿರುವ ನಿರ್ಜನ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಸ್ಥಳದಿಂದ ತಕ್ಷಣ ಪರಾರಿಯಾಗಿದ್ದಾರೆ.
ಮನೆಗೆ ಮರಳಿದ ಮಹಿಳೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು, ಬಗಾಡಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಮೂವರು ಆರೋಪಿಗಳನ್ನು ಗುರುತಿಸಲು ತನಿಖೆ ಆರಂಭಿಸಿದ್ದಾರೆ.