ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಮತ್ತೆ ಜೈಲು ಸೇರಿದೆ. ಐಷಾರಾಮಿ ಜೀವನ ನಡೆಸುತ್ತಿದ್ದ ನಟ ದರ್ಶನ್ ಮತ್ತೆ ಜೈಲು ಪಾಲಾಗಿದ್ದು, ಕಂಬಿ ಎಣಿಸುತ್ತಿದ್ದಾರೆ.
ಕೊಲೆ ಕೇಸ್ ನಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಸಂಕಷ್ಟ ಎದುರಾಗಿದ್ದುಫಾಸ್ಟ್ ಟ್ರ್ಯಾಕ್ ಕೋರ್ಟ್ ಗೆ ಮನವಿ ಸಲ್ಲಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ದರ್ಶನ್ & ಗ್ಯಾಂಗ್ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ ನೀಡಿತ್ತು, ಆದ್ದರಿಂದ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.
6 ತಿಂಗಳ ಒಳಗೆ ಟ್ರಯಲ್ ಮುಗಿಸಲು ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡುವುದಲ್ಲದೇ , ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಬೇಕು. ನಟ ದರ್ಶನ್ & ಗ್ಯಾಂಗ್ ಗೆ ಎಷ್ಟು ವರ್ಷ ಶಿಕ್ಷೆಯಾಗುತ್ತದೆ..! ದರ್ಶನ್ ಜೈಲಿನಿಂದ ಹೊರ ಬರಲು ಏನಾದರೂ ಸಾಧ್ಯತೆಯಿದೆಯಾ ಎಂಬುದನ್ನ ಕಾದು ನೋಡಬೇಕು.
ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳು (FTCs) ತ್ವರಿತ ನ್ಯಾಯವನ್ನು ಒದಗಿಸಲು ಸ್ಥಾಪಿಸಲಾದ ವಿಶೇಷ ನ್ಯಾಯಾಲಯಗಳಾಗಿವೆ. ಈ ನ್ಯಾಯಾಲಯಗಳು ಮುಖ್ಯವಾಗಿ ಲೈಂಗಿಕ ಅಪರಾಧಗಳು, ಅತ್ಯಾಚಾರ ಮತ್ತು POCSO ಕಾಯ್ದೆಯ ಉಲ್ಲಂಘನೆಗಳಂತಹ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸ್ಥಾಪಿಸಲಾಗಿದೆ, ಇದು ಬಾಕಿ ಉಳಿದಿರುವ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ಬಲಿಪಶುಗಳಿಗೆ ನ್ಯಾಯವನ್ನು ಒದಗಿಸಲು ಸಹಾಯ ಮಾಡುತ್ತದೆ.