HomeKarnatakaBREAKING : ಕಾಂಗ್ರೆಸ್ ಶಾಸಕ ಹ್ಯಾರಿಸ್ ಗೆ ಸಂಕಷ್ಟ : ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ...

BREAKING : ಕಾಂಗ್ರೆಸ್ ಶಾಸಕ ಹ್ಯಾರಿಸ್ ಗೆ ಸಂಕಷ್ಟ : ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು

ಬೆಂಗಳೂರು : ಕಾಂಗ್ರೆಸ್ ಶಾಸಕ ಹ್ಯಾರಿಸ್  ಕಾಂಗ್ರೆಸ್ ಶಾಸಕ ಹ್ಯಾರಿಸ್  ಗೆ  ಸಂಕಷ್ಟ ಎದುರಾಗಿದ್ದು, ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್ ಅಸ್ತು ಎಂದಿದೆ.

ತಮ್ಮ ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಶಾಸಕ ಎನ್ ಎ ಹ್ಯಾರೀಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕಳೆದ ಚುನಾವಣೆ ವೇಳೆ ಸಲ್ಲಿಸಲಾದ ಫಾರಂ ನಂ. 26ರಲ್ಲಿ ಶಾಂತಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಹ್ಯಾರೀಸ್ ತಮ್ಮ ಆಸ್ತಿ ವಿವರಗಳನ್ನು ಸರಿಯಾಗಿ ಘೋಷಿಸಿಲ್ಲ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಕೆ. ಶಿವಕುಮಾರ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಾಂತಿ ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎsನ್. ಎ. ಹ್ಯಾರೀಸ್ ತಮ್ಮ ಚರ ಮತ್ತು ಸ್ಥಿರಾಸ್ತಿಗಳ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಿಲ್ಲ ಎಂದು ತಕರಾರು ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular