HomeIndiaBIG NEWS: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

BIG NEWS: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.

ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತಕ್ಕೆ ನಾಲ್ವರು ಸಾವನ್ನಪ್ಪಿದ್ದಾರೆ. 19 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರಲ್ಲಿ ಮೂವರ ಗುರುತು ಪತ್ತೆಯಾಗಿದ್ದು, ಓರ್ವರ ಗುರುತು ಪತ್ತೆಯಾಗಿಲ್ಲ. ರಾಜಸ್ಥಾನದ ಗೋವಿಂದ್ (68), ರಮೇಶ್ (45), ಆಗ್ರಾದ ದೀಪಕ್ ವರ್ಮಾ (40) ಮೃತರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular