HomeIndiaBREAKING NEWS: ಟ್ರಕ್-ಕಾರು ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

BREAKING NEWS: ಟ್ರಕ್-ಕಾರು ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಆಗ್ರಾ: ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಟ್ರಕ್ ಗೆ ಡಿಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ನಡೆದಿದೆ.

ಇಟಾವಾ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಕಾನ್ಪುರದ ಕಡೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ, ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಗುದ್ದಿದೆ. ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾರು ಚಾಲಕ ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular