HomeIndiaBIG NEWS: ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ; ಮೂವರ ಸ್ಥಿತಿ ಗಂಭೀರ

BIG NEWS: ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ; ಮೂವರ ಸ್ಥಿತಿ ಗಂಭೀರ

ಚಿತ್ರಕೂಟ: ಟ್ರಕ್ ಹಾಗೂ ಇ-ರೀಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಚಿತ್ರಕೂಟದಲ್ಲಿ ನಡೆದಿದೆ.

ಚಿತ್ರಕೂಟದ ಅಮನ್ ಪುರದಲ್ಲಿ ಈ ದುರಂತ ಸಂಭವಿಸಿದೆ. ಟ್ರಕ್ ಹಾಗೂ ಇ-ರೀಕ್ಷಾ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಎಸ್ ಪಿ ಚಕ್ರಪಾಣಿ ತ್ರಿಪಾಠಿ ತಿಳಿಸಿದ್ದಾರೆ. ಝ್ಹಾನ್ಸಿ-ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಈ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular