ಹಾಸನ : ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದು, ಕ್ಯಾಂಟರ್ ಚಾಲಕ ಭುವನ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದಾಖಲಾಗಿದೆ. ಹಲ್ಲೆಗೊಳಗಾಗಿದ್ದ ಚಾಲಕ ಭುವನ್’ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಭಯಾನಕ ಘಟನೆ ನಡೆದಿದೆ. ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ಜನರ ಮೇಲೆ ಏಕಾಏಕಿ ಟ್ರಕ್ ನುಗ್ಗಿದೆ. ಪರಿಣಾಮ ಎಂಟು 9 ಮಂದಿ ಸಾವನ್ನಪ್ಪಿದರು ಮತ್ತು ಹಲವರು ಜನ ಗಂಭೀರವಾಗಿ ಗಾಯಗೊಂಡರು.
ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ರಾತ್ರಿ 8 ರಿಂದ 8:45 ರ ನಡುವೆ ಈ ದುರಂತ ಸಂಭವಿಸಿದೆ, ಆಗ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಗಣೇಶ ಹಬ್ಬದ ಅಂತಿಮ ವಿಧಿವಿಧಾನಗಳಲ್ಲಿ ಭಾಗವಹಿಸುತ್ತಿದ್ದರು. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
You Might Also Like
TAGGED:ಹಾಸನ