HomeKarnatakaಜ. 17ರ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಬೆಂಬಲ ಇಲ್ಲ: ರಾಜ್ಯ ಲಾರಿ ಮಾಲೀಕರು, ಏಜೆಂಟರ ಸಂಘ...

ಜ. 17ರ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಬೆಂಬಲ ಇಲ್ಲ: ರಾಜ್ಯ ಲಾರಿ ಮಾಲೀಕರು, ಏಜೆಂಟರ ಸಂಘ ತೀರ್ಮಾನ

ಬೆಂಗಳೂರು: ಹಿಟ್ ಅಂಡ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ, ದಂಡ ವಿಧಿಸಲು ಭಾರತೀಯ ನ್ಯಾಯ ಸಂಹಿತೆಯಲ್ಲಿ ಅವಕಾಶ ನೀಡಿರುವುದನ್ನು ವಿರೋಧಿಸಿ ಜನವರಿ 17 ರಿಂದ ಕರೆ ನೀಡಲಾಗಿರುವ ಲಾರಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರುಗಳ ಸಂಘ ಬೆಂಬಲ ನೀಡದಿರಲು ತೀರ್ಮಾನ ಕೈಗೊಂಡಿದೆ.

ಸಂಘದ ರಾಜ್ಯಾಧ್ಯಕ್ಷ ಜಿ.ಆರ್. ಷಣ್ಮುಖಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಕೆಲವರಿಗೆ ಹೊಸ ಕಾನೂನಿನ ಬಗ್ಗೆ ತಪ್ಪು ಮಾಹಿತಿ ಇದ್ದು, ಪ್ರಚಾರದ ಗೀಳಿನಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಘದ ಜೊತೆಗೆ 27 ಲಕ್ಷ ಚಾಲಕರು ಗುರುತಿಸಿಕೊಂಡಿದ್ದಾರೆ. ಮುಷ್ಕರಕ್ಕೆ ನಮ್ಮ ಯಾವುದೇ ಬೆಂಬಲ ಇಲ್ಲ. ಯಾವುದೇ ವಾಹನ ಸೇವೆ ಸ್ಥಗಿತಗೊಳಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಹೊಸ ಕಾನೂನಿನ ಬಗ್ಗೆ ಗೃಹ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಕಾನೂನಿನ ಆತಂಕಕಾರಿ ಪರಿಸ್ಥಿತಿ ವಿವರಿಸಿ ಕೆಲ ನಿಬಂಧನೆ ಹಿಂಪಡೆಯಲು ತಿಳಿಸಲಾಗಿದೆ. ಗೃಹ ಇಲಾಖೆ ಅಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಹೊಸ ಕಾನೂನಿನ ಬಗ್ಗೆ ತಪ್ಪು ಮಾಹಿತಿ ನೀಡಿ ಕೆಲವರು ಚಾಲಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular