HomeKarnatakaರಾಜ್ಯದಲ್ಲಿ ಇಂದಿನಿಂದ ಲಾರಿ ಮುಷ್ಕರ: ಎರಡು ಲಕ್ಷ ಲಾರಿಗಳ ಸಂಚಾರ ಸ್ಥಗಿತ ಸಾಧ್ಯತೆ

ರಾಜ್ಯದಲ್ಲಿ ಇಂದಿನಿಂದ ಲಾರಿ ಮುಷ್ಕರ: ಎರಡು ಲಕ್ಷ ಲಾರಿಗಳ ಸಂಚಾರ ಸ್ಥಗಿತ ಸಾಧ್ಯತೆ

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಜನವರಿ 17 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ. ಸುಮಾರು ಎರಡು ಲಕ್ಷ ಲಾರಿಗಳು ಸಂಚಾರ ಸ್ಥಗಿತಗೊಳಿಸಲಿವೆ ಎಂದು ಹೇಳಲಾಗಿದೆ.

ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘ ಈ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮುಷ್ಕರ ಯಶಸ್ವಿಯಾಗುವ ಬಗ್ಗೆ ಅನುಮಾನ ಮೂಡಿಸಿದೆ. ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ, 7 ಲಕ್ಷ ರೂ. ದಂಡ ವಿಧಿಸುವ ನಿಯಮ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಇದನ್ನು ವಿರೋಧಿಸಿ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಲಾರಿ ಮಾಲೀಕರು ಮತ್ತು ಚಾಲಕರು ಮುಷ್ಕರ ನಡೆಸಿದ್ದರಿಂದ ಕೇಂದ್ರ ಸರ್ಕಾರ ಕಠಿಣ ನಿಯಮ ಜಾರಿಗೊಳಿಸುವುದರಿಂದ ಹಿಂದೆ ಸರಿದಿತ್ತು. ಲಾರಿ ಮಾಲೀಕರ ಸಂಘಟನೆಗಳೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಲಾಗಿತ್ತು. ಬಳಿಕ ಮುಷ್ಕರ ಹಿಂಪಡೆಯಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗ ಹೊಸ ನಿಯಮ ಜಾರಿಯಿಂದ ಸಂಪೂರ್ಣವಾಗಿ ಹಿಂದೆ ಸರಿದಿರುವುದಾಗಿ ಘೋಷಿಸುವಂತೆ ಒತ್ತಾಯಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಇಂದಿನಿಂದ ಮುಷ್ಕರ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular