HomeKarnatakaBIG NEWS: ಜ. 17 ರಿಂದ ಲಾರಿ ಮಾಲೀಕರ ಮುಷ್ಕರ: ಅಗತ್ಯ ವಸ್ತು ಸಾಗಣೆಗೆ ವಿನಾಯಿತಿ

BIG NEWS: ಜ. 17 ರಿಂದ ಲಾರಿ ಮಾಲೀಕರ ಮುಷ್ಕರ: ಅಗತ್ಯ ವಸ್ತು ಸಾಗಣೆಗೆ ವಿನಾಯಿತಿ

ಬೆಂಗಳೂರು: ಜನವರಿ 17 ರಿಂದ ರಾಜ್ಯದ ಲಾರಿ ಮಾಲೀಕರ ಸಂಘದಿಂದ ಅಭಿವೃದ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ.

ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ, 7 ಲಕ್ಷ ರೂಪಾಯಿವರೆಗೆ ದಂಡ ವಿಧಿಸುವ ಕಠಿಣ ನಿಯಮ ಜಾರಿಯಿಂದ ಕೇಂದ್ರ ಸರ್ಕಾರ ಹಿಂದೆ ಸರಿಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಕ್ರಮಿಸಿ ಮುಷ್ಕರ ಕೈಗೊಳ್ಳಲಾಗಿದೆ.

ರಾಜ್ಯ ಲಾರಿ ಮಾಲೀಕರ ಸಂಘ, ದಕ್ಷಿಣ ಭಾರತ ಲಾರಿ ಮಾಲೀಕರ ಸಂಘ ಗುರುವಾರ ಸಭೆ ನಡೆಸಿ ಜನವರಿ 17ರಿಂದ ಮುಷ್ಕರ ನಡೆಸುವ ಬಗ್ಗೆ ಮತ್ತೊಮ್ಮೆ ತೀರ್ಮಾನ ಕೈಗೊಂಡಿವೆ. ರಾಜ್ಯ ಲಾರಿ ಮಾಲೀಕರು ಕೈಗೊಂಡಿರುವ ಮುಷ್ಕರಕ್ಕೆ ದಕ್ಷಿಣ ಭಾರತದ ಇತರೆ ರಾಜ್ಯಗಳ ಲಾರಿ ಮಾಲೀಕರು ಚಾಲಕರು ಬೆಂಬಲ ನೀಡಲು ಮನವಿ ಮಾಡಲಾಗಿದೆ. ಒಂದು ವೇಳೆ ಬೇರೆ ರಾಜ್ಯಗಳ ಲಾರಿ ಮಾಲೀಕರು ಬೆಂಬಲ ನೀಡದಿದ್ದರೂ ಕರ್ನಾಟಕದ ಲಾರಿ ಮಾಲೀಕರು ಮತ್ತು ಚಾಲಕರು ಮುಷ್ಕರ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪೆಟ್ರೋಲ್, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಲಾರಿಗಳಿಗೆ ಮುಷ್ಕರದಿಂದ ವಿನಾಯಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular