HomeIndiaBREAKING NEWS: ಕುಂಭಮೇಳದಿಂದ ಯಾತ್ರಿಕರನ್ನು ಕರೆತರುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ: 6ಕ್ಕೂ ಹೆಚ್ಚು ಜನರು ದುರ್ಮರಣ

BREAKING NEWS: ಕುಂಭಮೇಳದಿಂದ ಯಾತ್ರಿಕರನ್ನು ಕರೆತರುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ: 6ಕ್ಕೂ ಹೆಚ್ಚು ಜನರು ದುರ್ಮರಣ

ಘಾಜಿಪುರ: ಕುಂಭಮೇಳದಿಂದ ಯಾತ್ರಿಕರನ್ನು ಕರೆತರುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಪುರದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಟ್ರಕ್, ಯಾತ್ರಿಕರನ್ನು ಕರೆತರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ನಂದಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಸ್ಮಕಲಾ ಬಳಿ ಈ ಅಪಘಾತ ಸಂಭವಿಸಿದೆ. ಮೃತರು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿದ್ದ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ವಾಪಾಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular