ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದು: ವಿಜಯೇಂದ್ರ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಆದೇಶ ಹೊರಡಿಸಿದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದು ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಯಡಿಯೂರಪ್ಪ ಅವರ ಹಿಂಬಾಲಿಸಿಕೊಂಡು ಬರುತ್ತಲೇ ಇದೆ. ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ. ಇಂದು ಉಚ್ಚ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಘನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿ “ಯಡಿಯೂರಪ್ಪನವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ” ಎನ್ನುವ ಮಾತನ್ನು ಉಲ್ಲೇಖಿಸಿರುವುದು ಬಿ.ಎಸ್. ಯಡಿಯೂರಪ್ಪನವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ ಎಂದು ತಿಳಿಸಿದ್ದಾರೆ.

https://twitter.com/BYVijayendra/status/1801592162976731171

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read