HomeRecipiesಮಾಡಿ ನೋಡಿ ಆರೋಗ್ಯಕ್ಕೆ ಸಾಕಷ್ಟು ಲಾಭವಿರುವ ಕರಿಬೇವು ಚಟ್ನಿ

ಮಾಡಿ ನೋಡಿ ಆರೋಗ್ಯಕ್ಕೆ ಸಾಕಷ್ಟು ಲಾಭವಿರುವ ಕರಿಬೇವು ಚಟ್ನಿ

ಕರಿಬೇವು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ. ಇದು ಕಣ್ಣಿನ ಆರೊಗ್ಯಕ್ಕೆ ಕೂಡ ತುಂಬಾ ಒಳ್ಳೆಯದು. ಹಾಗೇ ಕೂದಲು ಬೆಳವಣಿಗೆಗೆ ಕೂಡ ಇದು ಸಹಾಯ ಮಾಡುತ್ತದೆ. ಈ ಕರಿಬೇವನ್ನು ಬಳಸಿಕೊಂಡು ಚಟ್ನಿ ಮಾಡುವ ವಿಧಾನ ಇದೆ. ಒಮ್ಮೆ ಮಾಡಿ ಸವಿದು ನೋಡಿ.

ಬೇಕಾಗುವ ಸಾಮಗ್ರಿಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1 ಕಪ್ – ಕರಿಬೇವು, 2 – ಈರುಳ್ಳಿ, ಬೆಳ್ಳುಳ್ಳಿ ಎಸಳು – 20, ಒಣಮೆಣಸು – 3, ಹುಣಸೆಹಣ್ಣು – ನೆಲ್ಲಿಕಾಯಿ ಗಾತ್ರದ್ದು, ಅರಿಶಿನ – 1 ಚಿಟಿಕೆ, ಎಣ್ಣೆ – 1 ಟೇಬಲ್ ಸ್ಪೂನ್, ಉಪ್ಪು – ರುಚಿಗೆ ತಕ್ಕಷ್ಟು, ನೀರು – ಅಗತ್ಯವಿರುವಷ್ಟು.

ಮಾಡುವ ವಿಧಾನ:

ಮೊದಲಿಗೆ ಕರಿಬೇವಿನ ಎಲೆಯನ್ನು ಚೆನ್ನಾಗಿ ತೊಳೆದಿಡಿ. ಗ್ಯಾಸ್ ಮೇಲೆ ಒಂದು ಪ್ಯಾನ್ ಇಟ್ಟು ಅದಕ್ಕೆ ಎಣ್ಣೆ ಹಾಕಿ ಈರುಳ್ಳಿ, ಮೆಣಸು, ಬೆಳ್ಳುಳ್ಳಿ ಸೇರಿಸಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಕರಿಬೇವು, ಅರಿಶಿನ, ಉಪ್ಪು, ಹುಣಸೆಹಣ್ಣು ಸೇರಿಸಿ 5 ನಿಮಿಷಗಳ ಕಾಲ ಹುರಿದು ಗ್ಯಾಸ್ ಆಫ್ ಮಾಡಿ.

ಇದು ತಣ್ಣಗಾದ ಮೇಲೆ ಮಿಕ್ಸಿ ಜಾರಿನಲ್ಲಿ ನಯವಾಗಿ ರುಬ್ಬಿಕೊಳ್ಳಿ. ಬೇಕಿದ್ದರೆ ಸಾಸಿವೆ ಒಗ್ಗರಣೆ ಕೊಡಿ. ಇಡ್ಲಿ ಜತೆ ಸವಿಯಲು ಚೆನ್ನಾಗಿರುತ್ತದೆ ಈ ಚಟ್ನಿ.

For Latest News Updates, Join Our Whatsapp Community🚩
RELATED ARTICLES

Most Popular