HomeKarnatakaBIG NEWS: ನಟೋರಿಯಸ್ ರೌಡಿ ಕುಣಿಗಲ್ ಗಿರಿ ಸೇರಿ 31 ರೌಡಿ ಶಿಟರ್ ಗಳು ಗಡಿಪಾರು

BIG NEWS: ನಟೋರಿಯಸ್ ರೌಡಿ ಕುಣಿಗಲ್ ಗಿರಿ ಸೇರಿ 31 ರೌಡಿ ಶಿಟರ್ ಗಳು ಗಡಿಪಾರು

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಖ್ಯಾತ ರೌಡಿಗಳನ್ನು ಗಡಿಪಾರು ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಎಸ್ ಪಿ ಅಶೋಕ್ ಕೆವಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲೆಯಲ್ಲಿ 31 ರೌಡಿಗಳನ್ನು ಗಡಿಪಾರು ಮಾಡಲಾಗಿದೆ. ಇತ್ತೀಚೆಗೆ ಕುಖ್ಯಾತ ರೌಡಿ ಕುಣಿಗಲ್ ಗಿರಿ ಜೈಲಿನಿಂದ ಬಿಡುಗಡೆಯಾಗಿದ್ದ. ಕುಣಿಗಲ್ ಗಿರಿ ಸೇರಿದಂತೆ 31 ರೌಡಿಗಳನ್ನು ಗಡಿಪಾರು ಮಾಡಲಾಗಿದೆ ಎಂದರು.

ಸಾರ್ವಜನಿಕ ವಲಯದಲ್ಲಿ ಅಶಾಂತಿ ಮೂಡಿಸುವ 1200 ರೌಡಿಗಳ ಚಟುವಟಿಕೆ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ ಓರ್ವ ಪೊಲೀಸ್, ನೋಡಲ್ ಅಧಿಕಾರಿ ಕಾರ್ಯನಿರ್ವಹಿಸುತ್ತಿದ್ದು ಶಾಂತಿಯುತ ಮತದಾನಕ್ಕೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular