BREAKING: ನಾರಿನ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಕಾರ್ಖಾನೆ

ತುಮಕೂರು: ನಾರಿನ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಇಡೀ ಕಾರ್ಖಾನೆ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿರುವ ನಾರಿನ ಫ್ಯಾಕ್ಟರಿಯಲ್ಲಿ ಈ ಅವಘಡ ಸಂಭವಿಸಿದೆ. ಜಯಣ್ಣ ಎಂಬುವವರಿಗೆ ಸೇರಿದ ನಾರಿನ ಫ್ಯಾಕ್ಟರಿ ಇದಾಗಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸುಮಾರು 6 ಲಕ್ಷ ಮೌಲ್ಯದ ನಾರು ಬೆಂಕಿಗಾಹುತಿಯಾಗಿದೆ. ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read