ಚಿಕ್ಕಬಳ್ಳಾಪುರ: ಸಾಮಾಜಿಕ ,ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮರು ಗಣತಿ ವಿಚಾರವಾಗಿ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,ಜಾತಿಗಣತಿ ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದರು.
ಗ್ರೇಟರ್ ಬೆಂಗಳೂರಿಗೆ ತುಮಕೂರು ಸೇರಿಸುವ ವಿಚಾರವಗೈ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು.
ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣದ ವಿಚಾರವಾಗಿ ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ ಎಂದರು.