ತುಮಕೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ.
ಎರಡು ಪ್ರತ್ಯೇಕ ಘಟನೆಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಯಂತ್ (32) ಹಾಗೂ ಶ್ರೀಧರ್ (52) ಮೃತ ದುರ್ದೈವಿಗಳು.
ರಾತ್ರಿ ಮಲಗಿದ್ದ ವೇಳೆ ವಿಪರೀತ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯಂತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು.
ಶ್ರೀಧರ್ ಮನೆಯಲ್ಲಿ ಟೀ ಕುಡಿದು ಕುಳಿತುಕೊಂಡವರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದದಗಿ ವೈದ್ಯರು ತಿಳಿಸಿದ್ದಾರೆ.