HomeKarnatakaವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ

ವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ

ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಬಿ.ಹೆಚ್ ರಸ್ತೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಈ ಅವಘಡ ಸಂಭವಿಸಿದೆ.

ಅದೃಷ್ಟವಶಾತ್ ವಿದ್ಯಾರ್ಥಿನಿಯರು ಅಪಾಯದಿಂದ ಪಾರಾಗಿದ್ದಾರೆ. ಹಾಸ್ಟೇಲ್ ನಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದರು. ಹಾಸ್ಟೇಲ್ ನಲ್ಲಿ ಬೆಂಕಿ ಹೊತ್ತಿ ಉರಿದಿದ್ದು, ವಿದ್ಯಾರ್ಥಿನಿಯರು ಹಾಸ್ಟೇಲ್ ನಿಂದ ಹೊರಗೋಡಿಬಂದು ಜೀವ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular