ತುಮಕೂರು: ಗುತ್ತಿಗೆದಾರನ ಬಳಿ ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಇಂಜಿನಿಯರ್ ಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನ ತಿಪಟೂರಿನಲ್ಲಿ ನಡೆದಿದೆ.
ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಬಿ.ಸಿ.ಸ್ವಾಮಿ ಹಾಗೂ ಇಂಜಿನಿಯರ್ ಸುಹಾಸ್ ಲೋಕಾಯುಕ್ತ ಬಲೆಗೆ ಬಿದ್ದವರು. ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನಿಂದ 34,500 ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಇಂಜಿನಿಯರ್ ಗಳಾದ ಸ್ವಾಮಿ ಹಾಗೂ ಸುಹಾಸ್ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಇದೇ ವೇಳೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಕಂಪ್ಯೂಟರ್ ಆಪರೇಟರ್ ಹರೀಶ್ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದೆ.
