HomeKarnatakaBIG NEWS: ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

BIG NEWS: ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

ತುಮಕೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಜಿಎಸ್ ಟಿ ಹಣ ಕಡಿತ ಮಾಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಂಜುನಾಥ್ ವಿ.ಕೆ. ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.

ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮುಂಗಡವಾಗಿ 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡೈವೈ ಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular