ತುಮಕೂರು: ಹಣದ ವಿಚಾರವಾಗಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಬಟವಾಡಿ ಬಳಿಯ ಮಹಾಲಕ್ಷ್ಮೀ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಚಾಕುವಿನಿಂದ ಇರಿದು ಕೋತಿತೋಪು ನಿವಾಸಿ ನಫೀಸ್ (33) ಎಂಬಾತನನ್ನು ಸ್ನೇಹಿತನೇ ಹತ್ಯೆ ಮಾಡಿದ್ದಾನೆ.
ಫೈರೋಜ್ ಪಾಷಾ, ನಸೀಫ್ ನನ್ನು ಹತ್ಯೆಗೈದ ಆರೋಪಿ. ಫೈರೋಜ್ ಪಾಷಾ ಬೈಕ್ ಗ್ಯಾರೇಜ್ ಇಟ್ಟುಕೊಂಡಿದ್ದ. ಟೈಲ್ಸ್ ಕೆಲಸ ಮಾಡುತ್ತಿದ್ದ ನಫೀಸ್ ಅಹ್ಮದ್, ಫೈರೋಜ್ ಪಾಷಾನಿಂದ 7 ಲಕ್ಷ ರೂಪಾಯಿ ಸಾಲ ಪಡೆದಿದ್ದ. ಸಾಲದ ಹಣದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದು, ಫೈರೋಜ್ ಪಾಷಾ, ನಫೀಸ್ ನನ್ನು ಕೊಲೆಗೈದಿದ್ದಾನೆ.
ತುಮಕೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.