HomeKarnatakaBIG NEWS: ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕಣ್ಣು, ತಲೆಯ ಭಾಗಕ್ಕೆ ಕಚ್ಚಿ...

BIG NEWS: ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯ

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ಈ ಘಟನೆ ನಡೆದಿದೆ. ಹಲೀಜಾ ಖಾನಂ ನಾಯಿ ದಾಳಿಗೆ ಗಂಭೀರವಾಗಿ ಗಾಯಗೊಂಡಿರುವ ಮಗು. ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಗ್ಗೆರೆ ಗ್ರಾಮಸ್ಥರು ಬೀದಿ ನಾಯಿ ಹಾವಳಿಗೆ ರೋಸಿ ಹೋಗಿದ್ದು, ನೂರಾರು ಬೀದಿ ನಾಯಿಗಳು ರಸ್ತೆಯಲ್ಲಿಯೇ ಒಡಾಡುತ್ತಿವೆ. ಮಕ್ಕಳು, ಹಿರಿಯರನ್ನು ಕಚ್ಚಿ ಗಾಯಗೊಳಿಸಿವೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಬೀದಿನಾಯಿಗಳಿಗೆ ಕಡಿವಾಣ ಹಾಕುತ್ತಿಲ್ಲ. ಮನುಷ್ಯ ಜೀವಕ್ಕೆ ಬೆಲೆ ಇಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular