HomeKarnatakaBREAKING NEWS: 7ನೇ ತರಗತಿ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣು

BREAKING NEWS: 7ನೇ ತರಗತಿ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣು

ತುಮಕೂರು: 7ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ತ್ರಿಶಾಲ್ (13) ಆತ್ಮಹತ್ಯೆ ಮಡಿಕೊಂಡಿರುವ ವಿದ್ಯಾರ್ಥಿ. ತುಮಕೂರು ನಗರದ ಸರ್ವೋದಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ. ಇಂದು ಬೆಳಿಗ್ಗೆ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾನೆ.

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪಾರಿವಾಳ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular