BIG NEWS: ದೇವಸ್ಥಾನದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ: ಅರ್ಚಕ ಅರೆಸ್ಟ್

ತುಮಕೂರು: ದೇವಸ್ಥಾನದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಅರ್ಚಕರೊಬ್ಬರನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಕುಣಿಗಲ್ ನ ಬೆಟ್ಟದ ರಂಗಸ್ವಾಮಿ ದೇವಸ್ಥಾನದ ಹುಂಡಿ ಮುಟ್ಟಿದ್ದಕ್ಕೆ ದೇವಸ್ಥಾನದ ಭದ್ರತಾ ಸಿಬ್ಬಂದಿ ಪಾರ್ಥರಾಜು ಎಂಬುವವರನ್ನು ಅರ್ಚಕ ರಾಕೇಶ್ ಬೈದಿದ್ದರಂತೆ. ಜಾತಿನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅರ್ಚಕ ರಾಕೇಶ್ ವಿರುದ್ಧ ಕುಣಿಗಲ್ ಠಾಣೆಯಲ್ಲಿ ಪಾರ್ಥರಾಜು ದೂರು ನೀಡಿದ್ದಾರೆ.

ಅಲ್ಲದೇ ರಾಕೇಶ್ ತನ್ನನ್ನು ಕೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಕುಣಿಗಲ್ ಠಾಣೆ ಪೊಲೀಸರು ಅರ್ಚಕ ರಾಕೇಶ್ ನನ್ನು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read