HomeLive Newsಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡುವ ನಿರ್ಧಾರದಿಂದ ಹಿಂದೆ ಸರಿದ ತುಮಕೂರು ವಿಶ್ವವಿದ್ಯಾಲಯ

ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡುವ ನಿರ್ಧಾರದಿಂದ ಹಿಂದೆ ಸರಿದ ತುಮಕೂರು ವಿಶ್ವವಿದ್ಯಾಲಯ

ತುಮಕೂರು: ತುಮಕೂರು ವಿಶ್ವವಿದ್ಯಾಲಯ ಮಾಜಿ ಸಚಿವರಾದ ಜಿ.ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣ ಅವರಿಗೆ ಗೌರವ ಡಾಕ್ಟರ‍ೇಟ್ ನೀಡುವ ನಿರ್ಧಾರದಿಂದ ಹಿಂದೆ ಸರಿದಿದೆ.

ತುಮಕೂರು ವಿಶ್ವ ವಿದ್ಯಾಲಯದ 19ನೇ ಘಟಿಕೋತ್ಸವವು ಜೂನ್ 3ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣ ಅವರಿಗೆ ಡಾಕ್ಟರೇಟ್ ನೀಡಲು ತೀರ್ಮಾನಿಸಿತ್ತು. ಆದರೆ ವಿವಿಯ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ನಿರ್ಧಾರದಿಂದ ಹಿಂದೆ ಸರಿಯಲಾಗಿದೆ.

ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡದಿರಲು ವಿವಿಯ ಪರಿಶೀಲನಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆ ಮಾಜಿ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ಕೆ. ಎನ್. ರಾಜಣ್ಣಗೆ ಗೌರವ ಡಾಕ್ಟರೇಟ್​ ನೀಡದಿರಲು ನಿರ್ಧರಿಸಲಾಗಿದೆ ಎಂದು ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ. ಜಿ. ಪರಮೇಶ್ವರ್ ಹಾಗೂ ಕೆ. ಎನ್. ರಾಜಣ್ಣ ಅವರ ಕೊಡುಗೆ ತುಂಬಾನೇ ಇದೆ. ಹೀಗಾಗಿ ಇಬ್ಬರಿಗೂ ಗೌರವ ಡಾಕ್ಟರೇಟ್ ನೀಡಬೇಕೆಂಬ ಆಶಯ ನಮಗಿತ್ತು. ಈ ನಿಟ್ಟಿನಲ್ಲಿ ನಾವು ಮೊನ್ನೆ ಇಬ್ಬರ ಹೆಸರುಗಳನ್ನು ಸೇರಿಸಿದ್ದೆವು. ಆದರೆ, ಪರಿಶೀಲನಾ ಸಮಿತಿಯು ಬೇರೆ ಬೇರೆ ರಾಜ್ಯಗಳಲ್ಲಿ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡುವ ನಿಯಮಗಳೇನು ಹಾಗೂ ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಯಾವ್ಯಾವ ರಾಜಕಾರಣಿಗಳು ಇದನ್ನು ಸ್ವೀಕರಿಸಿದ್ದಾರೆ ಅಥವಾ ನಿರಾಕರಿಸಿದ್ದಾರೆ ಎಂಬುದರ ಕುರಿತು ಚರ್ಚಿಸಿದೆ. ಈ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸತೀಶ್ ಜಾರಕಿಹೊಳಿ ಅವರು ತಮಗೆ ಬಂದ ಗೌರವ ಡಾಕ್ಟರೇಟ್ ಅನ್ನು ತಿರಸ್ಕರಿಸಿದ್ದರು. ಅಲ್ಲದೆ, ಸಿದ್ದರಾಮಯ್ಯಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದಾಗ, ಅವರೇ ಖುದ್ದಾಗಿ ಕರೆದು ಈ ರೀತಿ ಕೊಡಬಾರದು ಎಂದು ಹೇಳಿದ್ದರು. ಈ ಎಲ್ಲಾ ವಿಚಾರಗಳನ್ನು ಚರ್ಚಿಸಿದ ಸಮಿತಿಯು, ಇನ್ಮುಂದೆ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡಬಾರದು ಎಂದು ಅಂತಿಮವಾಗಿ ನಿರ್ಧರಿಸಿದೆ ಎಂದರು.

ರಾಜಕಾರಣಿಗಳನ್ನು ಹೊರತುಪಡಿಸಿ ಈ ಬಾರಿ ವಿವಿಧ ಕ್ಷೇತ್ರಗಳ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಟಿ. ಆರ್. ರೇವಣ್ಣ, ಕನ್ನಡದ ಕವಿ, ವಚನಕಾರ ಹಾಗೂ ಚಿಂತಕ ದ್ವಾರನಕುಂಟೆ ಪಾತಣ್ಣ, ಮತ್ತು ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ ಹಾಗೂ ವೃತ್ತಿನಿರತ ವಕೀಲ ಎನ್. ಆರ್. ಪ್ರದೀಪ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಬಾರಿಯ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್​ರಿಗೆ ಆಹ್ವಾನಿಸಲಾಗಿದ್ದು, ಮುಖ್ಯಮಂತ್ರಿಗಳ ಪದಗ್ರಹಣ ಕಾರ್ಯಕ್ರಮ ಇರುವುದರಿಂದ ಅವರು ಬರುವುದು ಇನ್ನೂ ಅಧಿಕೃತವಾಗಿಲ್ಲ. ಘಟಿಕೋತ್ಸವಕ್ಕೂ ಮುನ್ನ ರಾಜ್ಯಪಾಲರು ತುಮಕೂರು ವಿವಿಯಲ್ಲಿ ನೂತನವಾಗಿ ಸ್ಥಾಪನೆಗೊಂಡಿರುವ ತುಮಕೂರು ಇನ್ನೋವೇಶನ್ ಇನ್ ಕ್ಯುಬೇಶನ್ ಅಂಡ್ ಆಂತ್ರಪ್ರಿನ್ಯುರ್ ಶಿಪ್ ಕೌನ್ಸಿಲ್ ಹಾಗೂ ಗೋ ಗ್ರೀನ್- ಬೈಸಿಕಲ್ ಇನೀಶಿಯೇಟೀವ್ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular