ತುಮಕೂರು: ಗಂಡ-ಹೆಂಡತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಗೀತಾ(30) ಕೊಲೆಯಾದ ಮಹಿಳೆ. ನವೀನ್ ಪತ್ನಿಯನ್ನೇ ಕೊಂದ ಪತಿ. ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತಂತೆ. ಇದೇ ಕಾರಣಕ್ಕೆ ಪತಿ ನವೀನ್ ಪತ್ನಿಯನ್ನು 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಎರಡು ವರ್ಷಗಳ ಹಿಂದೆ ನವೀನ್ ಹಾಗೂ ಗೀತಾ ವಿವಾಹವಾಗಿದ್ದು, ಅಂತರಸನಹಳ್ಳಿ ಬಾಡಿಗೆ ಮನೆಯಲ್ಲಿ ದಂಪತಿ ವಾಸವಾಗಿದ್ದರು. ಪತಿ ನವೀನ್ ಕುಡಿತದ ದಾಸನಾಗಿದ್ದ. ಇದೇ ಕಾರಣಕ್ಕೆ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು ಎನ್ನಲಾಗಿದೆ. ಇಂದು ಮನೆಯ ಮಾಲೀಕರು ಬಾಡಿಗೆ ಕೇಳಲು ಮನೆಗೆ ಬಂದಾಗ ಮಹಿಳೆ ಗೀತಾ ರಕ್ತದ ಮಡುವಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ಪತ್ನಿಯನ್ನು ಕೊಲೆಗೈದು ಪತಿ ನವೀನ್ ನಾಪತ್ತೆಯಾಗಿದ್ದಾನೆ. ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.