ತುಮಕೂರು: ಕಡಪ ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನಸ್ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ತಾಲೂಕಿನ ರಂಗನಾಥಪುರ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಅಷದ್ ಅಲಿ (೨೨) ಹಾಗೂ ಅಮೀನ್ (೨೫) ಮೃತ ದುರ್ದೈವಿಗಳು. ಭಾಅರಿ ತೂಕದ ಕಡಪ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳದಲ್ಲೇ ಚಾಲಕ ಹಾಗೂ ಕ್ಲೀನರ್ ಮೃತಪಟ್ಟಿದ್ದಾರೆ.
ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಹೆಬ್ಬೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

